ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ವತಿಯಿಂದ ನಮನ ಸಲ್ಲಿಸುವ ಸಲುವಾಗಿ ‘ಪುನೀತ ನಮನ’ ಕಾರ್ಯಕ್ರಮ ಆಯೋಜಿಸಲಾಗಿದೆ. ನವೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ, ದಕ್ಷಿಣ ಭಾರತ ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ. ಸುಮಾರು 1,500 ಜನರು ಸೇರಿ ನಮನ ಸಲ್ಲಿಸುವ ಯೋಜನೆ ರೂಪಿಸಲಾಗಿದೆ. ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿರುವ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಹಾಗಾದರೆ ಸಾರ್ವಜನಿಕರಿಗೆ ಇದರ ವೀಕ್ಷಣೆ ಹೇಗೆ ಸಾಧ್ಯ