ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ವಿರುದ್ಧ ನಟ ಧನ್ವೀರ್ ಗೌಡ ಆಡಿರುವ ಮಾತುಗಳು ಮತ್ತು ಹರಿದಾಡುತ್ತಿರುವ ವೈರಲ್ ಆಡಿಯೋ ಸ್ಯಾಂಡಲ್ವುಡ್ನಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಜೈಲಿಗೆ ಭೇಟಿ ನೀಡಿ ಹೊರಬಂದ ನಟ ಝೈದ್ ಖಾನ್, ಧನ್ವೀರ್ ವಿರುದ್ಧ ದರ್ಶನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾನೂನು ಕ್ರಮ ಜರುಗಿಸಲು ಸೂಚಿಸಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳ