ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್ಕುಮಾರ್, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಪುನೀತ್ ಅವರಿಗೆ ಗಂಡು ಮಕ್ಕಳಿಲ್ಲ. ಆ ಕಾರಣದಿಂದ ಅವರ ಸಹೋದರ ರಾಘವೇಂದ್ರ ರಾಜ್ಕುಮಾರ್ ಅವರ ಪುತ್ರ ವಿನಯ್ ರಾಜ್ಕುಮಾರ್ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು. ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ಅವರ