ಲಾಕ್ ಡೌನ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆ?

ಬೆಂಗಳೂರು| Krishnaveni K| Last Modified ಗುರುವಾರ, 3 ಜೂನ್ 2021 (10:09 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸಿನಿಮಾ ಬಳಿಕ ಮತ್ತೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ.  
> ಮುಫ್ತಿ ನಿರ್ದೇಶಕ ನರ್ತನ್ ನಿರ್ದೇಶನದಲ್ಲಿ ಯಶ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ. ಆದರೆ ಯಶ್ ಕಡೆಯಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ.>   ಮೂಲಗಳ ಪ್ರಕಾರ ಲಾಕ್ ಡೌನ್ ಗೌಜಿ ಗದ್ದಲಗಳು ಮುಗಿದ ಬಳಿಕ ಯಶ್ ಹೊಸ ಸಿನಿಮಾ ಘೋಷಣೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ. ಈಗಾಗಲೇ ಯಾವ ಸಿನಿಮಾ, ಯಾರ ನಿರ್ದೇಶನ ಎಂಬಿತ್ಯಾದಿ ವಿಚಾರಗಳು ಫೈನಲ್ ಆಗಿದ್ದು, ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.ಇದರಲ್ಲಿ ಇನ್ನಷ್ಟು ಓದಿ :