ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಿತ್ರ ತಂಡ ಭಾನುವಾರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದೆ. ನಟ ಯಶ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಲಿಕಾಪ್ಟರ್ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ