ಬೆಂಗಳೂರು: ಯೋಗರಾಜ್ ಭಟ್ ತಮ್ಮ ಗಾಳಿಪಟ 2 ಸಿನಿಮಾ ಕೆಲಸಗಳಲ್ಲಿ ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಹಲವು ದಿನಗಳ ಹಿಂದೆಯೇ ಚಿತ್ರಕ್ಕೆ ಚಾಲನೆ ನೀಡಿದ್ದರೂ ಇನ್ನೂ ಚಿತ್ರೀಕರಣ ಆರಂಭವಾಗಿಲ್ಲ.ಅದಕ್ಕೆ ಉತ್ತರ ಕರ್ನಾಟಕದಲ್ಲಿ ಗುರುತಿಸಲಾಗಿದ್ದ ಲೊಕೇಷನ್ ಗಳಲ್ಲಿ ನೆರೆ ಪರಿಸ್ಥಿತಿ ಇದ್ದಿದ್ದೇ ಕಾರಣ ಎನ್ನಲಾಗಿದೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭಿಸಲು ಭಟ್ಟರು ಯೋಜನೆ ಮಾಡಿದ್ದಾರೆ.ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜತೆಗೆ ದಿಗಂತ್, ಪವನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆದರೆ ಇವರಿಗೆ ನಾಯಕಿಯರು ಯಾರು ಎಂಬ