ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರಿ ರಿಲೀಸ್ ಈವೆಂಟ್ ನ್ನು ದೊಡ್ಮನೆ ಅದ್ಧೂರಿಯಾಗಿ ಆಯೋಜಿಸುತ್ತಿದೆ.ಈ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ವಹಿಸಿಕೊಂಡಿದ್ದಾರೆ. ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಬೃಹತ್ ವೇದಿಕೆ ಸಿದ್ಧಪಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗುತ್ತಿದೆ.ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಶ್ವಿನಿ ಪುನೀತ್ ಕಳೆದ ಒಂದು ತಿಂಗಳಿನಿಂದ ಓಡಾಡುತ್ತಿದ್ದಾರೆ.