ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ತೆಲುಗಿನಲ್ಲೂ ಬಿಡುಗಡೆಯಾಗಲು ಸಿದ್ಧವಾಗಿದೆ.ಯುವರತ್ನ ತಂಡ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಸಿನಿಮಾ ಬಗ್ಗೆ ಪ್ರಚಾರ ಮಾಡಲಿದೆ. ಈ ಮೂಲಕ ರಿಲೀಸ್ ಗೂ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸಲಿದೆ.ಎಲ್ಲರಿಗೂ ಗೊತ್ತಿರುವ ಹಾಗೆ ಯುವರತ್ನ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಹೀಗಾಗಿ ಅಲ್ಲಿನ ಪ್ರೇಕ್ಷಕರನ್ನು ಸೆಳೆಯಲು ತೆಲುಗಿನಲ್ಲೂ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಯುವರತ್ನ ತಂಡ ಯೋಜನೆ ನಡೆಸಿದೆ