ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಏಪ್ರಿಲ್ 1 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಸುಮಾರು 400 ಥಿಯೇಟರ್ ಗಳಲ್ಲಿ ಹಾಗೂ ಆಂಧ್ರಪ್ರದೇಶದಲ್ಲಿ 200 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೆ, ಅಮೆರಿಕಾದಲ್ಲಿ ಏಪ್ರಿಲ್ 1 ರಂದೇ ಚಿತ್ರತೆರೆ ಕಾಣುತ್ತಿದೆ. ವೀಕೆಂಡ್ ಸಿನಿಮಾಸ್ ಸಂಸ್ಥೆ ಉತ್ತರ ಅಮೆರಿಕಾದಲ್ಲಿ ಏಪ್ರಿಲ್ 1 ರಂದು ಚಿತ್ರ ಬಿಡುಗಡೆ