ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಟಿಸಿರುವ ಪುಕ್ಸಟ್ಟೆ ಲೈಫ್ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಸಂಚಾರಿ ವಿಜಯ್ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಚಿತ್ರದ ವಿಶೇಷ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಅರವಿಂದ್ ಕುಪ್ಳಿಕರ್ ನಿರ್ದೇಶನದ ಮೊದಲ ಸಿನಿಮಾ ಇದು. ಈ ಚಿತ್ರದಲ್ಲಿ ವಿಜಯ್ ಬೀಗ ರಿಪೇರಿ ಮಾಡುವ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ಒಬ್ಬ ಮಧ್ಯಮ ವರ್ಗದ ವ್ಯಕ್ತಿ ಹಣದ ಹಿಂದೆ ಬಿದ್ದರೆ ಏನೆಲ್ಲ ಆಗುತ್ತದೆ ಎಂಬುದು ಚಿತ್ರದ