ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಂದೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಅಕ್ಷ ಆಸ್ಪತ್ರೆಯಲ್ಲಿ ಅವರ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿ ಹಂಚಿಕೊಂಡಿರುವ ಧ್ರುವ ಸರ್ಜಾ, ತಾಯಿ-ಮಗು ಆರೋಗ್ಯವಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಸೋಶಿಯಲ್ ಮೀಡಿಯಾ ಮೂಲಕ. ಶನಿವಾರ ಸಂಜೆ ಪ್ರೇರಣಾ ಅವರನ್ನು ಕೆಆರ್ ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಧ್ರುವ ಸರ್ಜಾ ಎಲ್ಲಾ ಕಾರ್ಯಕ್ರಮಗಳನ್ನು ಬದಿಗಿಟ್ಟು ಆಸ್ಪತ್ರೆಗೆ ಆಗಮಿಸಿದ್ದರು.