ಕಾಂತಾರಾ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಬಂಗಾರದ ಬೆಳೆ ತೆಗೆದು, ದೇಶಾದ್ಯಂತ ಸಖತ್ ಸದ್ದು ಮಾಡಿತ್ತು. ಕಾಂತಾರ ಸೃಷ್ಟಿಕರ್ತ, ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಂದಿನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ರು. ಇದೀಗ ರಿಷಬ್ ಶೆಟ್ಟಿಯವರ ಹುಟ್ಟುಹಬ್ಬ ಸನಿಹದಲ್ಲಿದ್ದು, ತಮ್ಮ ಬರ್ತಡೇಯನ್ನು ನೆಚ್ಚಿನ ಅಭಿಮಾನಿಗಳ ಜೊತೆಯಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇದೇ 7ನೇ ತಾರೀಕು ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬ. ಹಾಗಾಗಿ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ಮಧ್ಯಾಹ್ನ 3 ಗಂಟೆಗೆ,