ಇದಕ್ಕೂ ವಾಸ್ತವಕ್ಕೂ ಸಂಬಂಧ ಹುಡುಕಲು ಹೋಗಬೇಡಿ. ನಿಜ ಜೀವನದಲ್ಲಿ ಹೀಗೆಲ್ಲಾ ನಡೆಯಲು ಸಾಧ್ಯವೇ ಇಲ್ಲ ಎಂಬ ಪ್ರಶ್ನೆ ಹಾಕಿಕೊಳ್ಳಲೇ ಬೇಡಿ. ಹೀಗೂ ಆಗಬಹುದೇ ಎಂಬ ಸಂಶಯ ಚೂರೂ ಇಟ್ಟುಕೊಳ್ಳದೆ ನೋಡಿದರೆ ರಮೇಶ್ ಅರವಿಂದ್ ರ ಪುಷ್ಪಕ ವಿಮಾನ ಅದ್ಭುತ ಯಾನವಾಗುವುದರಲ್ಲಿ ಸಂಶಯವೇ ಇಲ್ಲ.