ಮಣ್ಣನ್ನು ಫಿಲ್ಟರ್ ಮಾಡಿ, ಅದನ್ನು ಮರಳು ಎಂದು ಮಾರಾಟ ಮಾಡುತ್ತಿದ್ದ ಅಕ್ರಮ ಮರಳು ಫಿಲ್ಟರ್ ದಂದೆ ನಡೆಸುತ್ತಿದ್ದ ಜಾಲದ ಮೇಲೆ ಬೆಂಗಳೂರು ಗ್ರಾಮಾಂತರ ಪ್ರದೇಶದ ಡಿ.ಸಿ ಶಂಕರ್ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ ಸುಮಾರು 4 ಗಂಟೆ ಸಮಯದಲ್ಲಿ ಈ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 209 ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಡಿಸಿ ವಶಕ್ಕೆ ಪಡೆದಿದ್ದಾರೆ.