ಬೆಂಗಳೂರು: ರಾಜ್ಯಸಭೆಯಲ್ಲಿ ಖಾಲಿಯಿರುವ ಒಂದು ಸ್ಥಾನಕ್ಕೆ ಆಗಸ್ಟ್ 29 ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ ಮುಖಂಡ ಅನಿಲ್ ಲಾಡ್ ಅವರ ರಾಜ್ಯಸಭೆ ಸದಸ್ಯತ್ವ 2014ರ ಜೂನ್ 25ಕ್ಕೆ ಅಂತ್ಯಗೊಳ್ಳಬೇಕಾಗಿತ್ತು. ಆದರೆ, ಲಾಡ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.