ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ

ಮಂಗಳವಾರ, 4 ಮಾರ್ಚ್ 2014 (12:44 IST)

PR
PR
ಬೆಂಗಳೂರು: ಮೈಸೂರು ಮಿನರಲ್ಸ್ ಲಿ. ನಷ್ಟಕ್ಕೆ ಕಾರಣವಾಗಿದ್ದ 6 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದ ವಿಶೇಷ ತನಿಖಾ ತಂಡದಿಂದ ತನಿಖೆಗೆ ಸಚಿವ ಸಂಪುಟ ನಿರ್ಧರಿಸಿದೆ. 6 ಮಂದಿ ಅಧಿಕಾರಿಗಳಿಂದ ಮೈಸೂರು ಮಿನರಲ್ಸ್‌ಗೆ 642 ಕೋಟಿ ನಷ್ಟ ಉಂಟಾಗಿದೆ ಎಂದು ಲೋಕಾಯುಕ್ತ ಮೊದಲ ತನಿಖಾ ವರದಿಯಲ್ಲಿ ಹೇಳಲಾಗಿತ್ತು . ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ನೇತೃತ್ವದಲ್ಲಿ ಉನ್ನತಾಧಿಕಾರಿಗಳು ಕೂಡ ಐಎಎಸ್‌ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದರು. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ಹೇಳಿದ್ದರು.

ಹಾಲಿ ಮಂತ್ರಿಗಳೂ ಕೂಡ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರೂ ಕೇಳಿಬಂದಿದೆ. ಈ ಕುರಿತು ಲೋಕಾಯುಕ್ತ ವಿಶೇಷ ತನಿಖಾ ತಂಡ ತನಿಖೆ ಮಾಡಿ ವರದಿ ನೀಡಲಿದೆ. ಎಂಎಂಎಲ್‌ನಿಂದ ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರಿಂದ ಎಂಎಂಎಲ್‌ಗೆ 642 ಕೋಟಿ ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿತ್ತು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...