Widgets Magazine

ಕೆಪಿಎಸ್‌ಸಿ ನೇಮಕಾತಿ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು| ರಾಜೇಶ್ ಪಾಟೀಲ್| Last Modified ಶನಿವಾರ, 29 ಜೂನ್ 2013 (13:30 IST)
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 362 ಗೆಜೆಟೆಡ್‌ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
362 ಗೆಜೆಟೆಡ್‌ ಪ್ರೊಬೆಷನರ್ ಹುದ್ದೆಗಳ ಭರ್ತಿಗಾಗಿ ಕೆಪಿಎಸ್‌ಸಿ ಲಿಖೀತ ಪರೀಕ್ಷೆ ಹಾಗೂ ಮೌಖೀಕ ಸಂದರ್ಶನ ನಡೆಸಿತ್ತು. ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿತ್ತು. ಈ ಮಧ್ಯೆ, ಲಿಖೀತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಸಂದರ್ಶನದಲ್ಲಿ ಕಡಿಮೆ ಅಂಕ ನೀಡಲಾಗಿದೆ. ಸಂದರ್ಶನದಲ್ಲಿ ಹೆಚ್ಚು ಅಂಕ ನೀಡಲು ಹಣದ ವ್ಯವಹಾರ ನಡೆದಿದೆ. ಕೆಪಿಎಸ್‌ಸಿ ಸದಸ್ಯರೇ ಅಭ್ಯರ್ಥಿಗಳಿಗೆ ದೂರವಾಣಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.


ಇದರಲ್ಲಿ ಇನ್ನಷ್ಟು ಓದಿ :