ನಂದನ್ ನಿಲೇಕಣಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ರೆ ಸ್ಪರ್ಧಿಸುವ ಇಚ್ಛೆ

ವೆಬ್‌ದುನಿಯಾ| Last Modified ಶುಕ್ರವಾರ, 10 ಜನವರಿ 2014 (19:25 IST)
PR
PR
ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ತಾವು ಚುನಾವಣೆಗೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಇದರಿಂದ ಅವರ ರಾಜಕೀಯ ಅಖಾಡಕ್ಕೆ ಪ್ರವೇಶದ ಬಗ್ಗೆ ಇದ್ದಿದ್ದ ಊಹಾಪೋಹಕ್ಕೆ ತೆರೆಬಿದ್ದಿದೆ. ರಾಜಕೀಯ ರಂಗದಲ್ಲಿ ನಾನು ಏನಾದರೂ ಮಾಡಬೇಕೆಂಬ ಆಸಕ್ತಿ ಹೊಂದಿದ್ದೇನೆ. ಏಕೆಂದರೆ ಭಾರತಕ್ಕೆ ಸಾಕಷ್ಟು ಬದಲಾವಣೆಯ ಅಗತ್ಯವಿದೆ. ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದರು.


ಇದರಲ್ಲಿ ಇನ್ನಷ್ಟು ಓದಿ :