ಬೆಂಗಳೂರು: ಡಿಕೆಶಿ ಮತ್ತು ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧರಿಸಿರುವುದರಿಂದ ಈಗ ಇನ್ನೂ ಕೆಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನನಗೂ ಒಂದು ಛಾನ್ಸ್ ಕೊಡಿ ಎಂದು ಬೆಂಗಳೂರಿನಲ್ಲಿ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಪ್ರಾತಿನಿಧ್ಯ ಸಿಗಬೇಕಿರುವುದರಿಂದ ತಮಗೂ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ನಾನೂ 6 ಬಾರಿ ಶಾಸಕನಾಗಿದ್ದೇನೆ.