ನಿಲೇಕಣಿ ದಕ್ಷಿಣ ಲೋಕಸಭೆಯಲ್ಲಿ ನಿಲ್ಲುವುದಕ್ಕೆ ದಿನೇಶ್ ಗುಂಡೂರಾವ್ ಅಪಸ್ವರ
ವೆಬ್ದುನಿಯಾ|
Last Modified ಗುರುವಾರ, 16 ಜನವರಿ 2014 (13:42 IST)
PR
PR
ಬೆಂಗಳೂರು: ವಿಶಿಷ್ಠ ಗುರುತು ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಅವರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆಂಬ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ನ ಕೆಲವು ಮುಖಂಡರು ಅಪಸ್ವರವೆತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಈ ಕುರಿತು ಪತ್ರ ಬರೆದಿದ್ದು, ಕಾಂಗ್ರೆಸ್ಗೆ ಸ್ಥಳೀಯರನ್ನು ಅಭ್ಯರ್ಥಿಯಾಗಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಹೈ ಪ್ರೊಫೈಲ್ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯ ಅನಂತಕುಮಾರ್ ಕಣಕ್ಕಿಳಿಯಲಿದ್ದಾರೆ.