ನೀತಿ ಸಂಹಿತೆ ಉಲ್ಲಂಘನೆ: ಶ್ರೀರಾಮುಲುಗೆ ಜಾಮೀನು

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಬಳ್ಳಾರಿ: ಬಿಜೆಪಿಗೆ ಮರುಸೇರ್ಪಡೆಯಾಗಿರುವ ಶ್ರೀರಾಮುಲು ಅವರಿಗೆ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಜಾರಿಯಾಗಿದ್ದ ವಾರಂಟ್‌ಗೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡಲಾಗಿದೆ. 2013 ರ ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಶ್ರೀರಾಮುಲು ವಿರುದ್ಧ ಕೇಸ್ ದಾಖಲಾಗಿತ್ತು. ಬಳ್ಳಾರಿ ಜಿಲ್ಲಾ ನ್ಯಾಯಾಲಯ ಶ್ರೀರಾಮುಲು ಸೇರಿ 8 ಜನರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು. ಕೌಲ್ ಬಜಾರ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಜಾಮೀನು ಸಿಕ್ಕಿರುವುದರಿಂದಾಗಿ ಶ್ರೀರಾಮುಲು ಅವರಿಗೆ ರಿಲೀಫ್ ಉಂಟಾಗಿದೆ. ಕೋರ್ಟ್‌ನಿಂದ ಶ್ರೀರಾಮುಲು ಸೇರಿ ನಾಲ್ವರ ವಿರುದ್ಧ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಶ್ರೀರಾಮುಲು ಬಳ್ಳಾರಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರಾದ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :