ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಬಳಿ ಏರ್ಗನ್ ಹಿಡಿದು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರು ಯುಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರ್ಷ ಪಟೇಲ್ (23) ಹಾಗೂ ಅಭಿಷೇಕ್ (23) ಬಂಧಿತ ಆರೋಪಿಗಳು. ಆರೋಪಿಗಳಿಂದ ಒಂದು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ.