ಬಿಜೆಪಿ ಮಹಿಳೆಯರಿಗೆ ಯಾವ ಕಾರ್ಯಕ್ರಮ ಹಮ್ಮಿಕೊಳ್ಳಲಿಲ್ಲ: ಸಿಎಂ ಟೀಕೆ
ತುಮಕೂರು|
ವೆಬ್ದುನಿಯಾ|
Last Modified ಭಾನುವಾರ, 16 ಫೆಬ್ರವರಿ 2014 (16:23 IST)
PR
PR
ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಲೋಕಸಭೆ ಚುನಾವಣೆ ಒಂದು ಸವಾಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತುಮಕೂರಿನ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೇಶಕ್ಕೆ ಉಳಿಗಾಲವಿಲ್ಲ. ಕೋಮುವಾದಿ ಬಿಜೆಪಿ ಏನಾದರೂ ಮಾಡಿ ಅಧಿಕಾರ ಪಡೆಯಲು ಸತತ ಪ್ರಯತ್ನ ಮಾಡುತ್ತಿದೆ. ಅವರು ಅಧಿಕಾರಕ್ಕೆ ಬಂದ್ರೆ ಬಡವರಿಗೆ, ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ. ವಾಜಪೇಯಿ 6 ವರ್ಷಗಳ ಕಾಲ ಪ್ರಧಾನಿಯಾಗಿದ್ದರು.