'ಮಠಗಳನ್ನು ವಶಕ್ಕೆ ತೆಗೆದುಕೊಂಡ್ರೆ ಚುನಾವಣೆಯಲ್ಲಿ ಸೋಲು'

ವೆಬ್‌ದುನಿಯಾ| Last Modified ಬುಧವಾರ, 29 ಜನವರಿ 2014 (12:08 IST)
PR
PR
ಮಠಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಬಗ್ಗೆ ಸಿಎಂ ಹಾಗೂ ಸಚಿವ ಹುಕ್ಕೇರಿ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ನಾವು ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಬೇಕಾಗುತ್ತದೆ ಎಂದು ಶಾಸಕರು ಒಕ್ಕೋರಲಿನಿಂದ ತಿಳಿಸಿದ್ದಾರೆ. ಎಲ್ಲ ಮಠ, ಮಾನ್ಯಗಳನ್ನು ರಾಜ್ಯಸರ್ಕಾರದ ವ್ಯಾಪ್ತಿಗೆ ತೆಗೆದುಕೊಳ್ಳುವ ವಿಷಯ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪವಾಯಿತು. ಇದರಿಂದ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳುವುದನ್ನು ಕೈಬಿಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :