ಶುಕ್ರವಾರ ರಾಜ್ಯಕ್ಕೆ ರಾಷ್ಟ್ರಪತಿ ಆಗಮನ

PTI
ಮೂರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಶುಕ್ರವಾರ ನಗರಕ್ಕೆ ಆಗಮಿಸಲಿದ್ದಾರೆ. ಇದು ರಾಷ್ಟ್ರಪತಿ ಅಧಿಕಾರ ಸ್ವೀಕರಿಸಿದ ಬಳಿಕದ ಅವರ ಮೊದಲ ಭೇಟಿಯಾಗಿದೆ.

ರಾಜಭವನದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ರಾಷ್ಟ್ರಪತಿಯವರು ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ರಾಷ್ಟ್ರಪತಿ ಆಳ್ವಿಕೆ ಇರುವುದರಿಂದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅವರು ಚರ್ಚೆ ನಡೆಸುವ ಸಾಧ್ಯತೆಗಳಿವೆ. ಬಳಿಕ ನಾಳೆ ಸಂಜೆ ಜ್ಞಾನಭಾರತಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವೊಂದರಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು| ಇಳಯರಾಜ|
ಕರ್ನಾಟಕದ ಪ್ರವಾಸಿ ತಾಣಗಳನ್ನು ರೈಲಿನ ಪ್ರವಾಸದ ಮೂಲಕ ಬಿಂಬಿಸುವ ರೈಲನ್ನು ಫೆಬ್ರವರಿ 2ರಂದು ರಾಷ್ಟ್ರಪತಿಯವರು ಉದ್ಘಾಟಿಸಲಿದ್ದಾರೆ. ಅಲ್ಲದೆ, ಫೆಬ್ರವರಿ 3ರಂದು ಹಂಪಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಲ್ಲಿಂದ ಮರಳಿ ದಿಲ್ಲಿಗೆ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.


ಇದರಲ್ಲಿ ಇನ್ನಷ್ಟು ಓದಿ :