ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯವಿಲ್ಲ: ದೇಶಪಾಂಡೆ

ಬೆಂಗಳೂರು, ಶನಿವಾರ, 3 ಜನವರಿ 2009 (20:36 IST)

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರಕ್ಕೆ ಬಾರದ ಮಾಜಿ ಉಪಮುಖ್ಯಮಂತ್ರಿ ಅವರ ವರ್ತನೆಯ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆರ್.ವಿ. ದೇಶಪಾಂಡೆ ಕಿಡಿಕಾರಿದ್ದಾರೆ.

ಇದೇ ಮೊದಲ ಬಾರಿಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ದೇಶಪಾಂಡೆ, ಸಿದ್ದರಾಮಯ್ಯ ಅವರ ವರ್ತನೆ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಕ್ಷದ ಮುಖಂಡರಾಗಿರುವ ಸಿದ್ದರಾಮಯ್ಯ ಪ್ರಚಾರಕ್ಕೆ ಬರಬೇಕಿತ್ತು. ಇದು ಅವರ ಕರ್ತವ್ಯವಾಗಿತ್ತು. ಆದರೆ ಪಕ್ಷದ ವಿಷಯದಲ್ಲೂ ಅವರು ತಮ್ಮ ನಿಲುವಿಗೆ ಅಂಟಿಕೊಂಡಿದ್ದು ಸಹಿಸಿಕೊಳ್ಳುವ ವರ್ತನೆಯಲ್ಲ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಭವಿಷ್ಯವಿಲ್ಲ ಎನ್ನುವುದು ಇದರಿಂದ ಸಾಬೀತಾಗಿದೆ. ಪಕ್ಷದ ಬೇಡಿಕೆಯನ್ನೂ ತಿರಸ್ಕರಿಸಿರುವ ಸಿದ್ದರಾಮಯ್ಯ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ ಎಂದು ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...