ಹಿರಿಯ ಪತ್ರಕರ್ತ ಸಂತೋಷ್ ಕುಮಾರ್ ಗುಲ್ವಾಡಿ ವಿಧಿವಶ

ಬೆಂಗಳೂರು, ಗುರುವಾರ, 9 ಡಿಸೆಂಬರ್ 2010 (14:56 IST)

PR
ಹಿರಿಯ ಪತ್ರಕರ್ತ, ವಾರಪತ್ರಿಕೆ ಮಾಜಿ ಸಂಪಾದಕ ಗುಲ್ವಾಡಿ ಸಂತೋಷ್ ಕುಮಾರ್ (72) ಹೃದಯಾಘಾತದಿಂದ ಮಂಗಳವಾರ ವಿಧಿವಶರಾಗಿದ್ದಾರೆ.

ಮೃತರು ಪತ್ನಿ ಸುದೇಷ್ಣಾ, ಪುತ್ರಿ ಸಂಸ್ಕೃತಿ, ಪುತ್ರ ಡಾ.ಸಮರ್ಥ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮಲ್ಲೇಶ್ವರದ ಎವರೆಸ್ಟ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಗುಲ್ವಾಡಿ, ಸಂಜೆ 6.45ರ ವೇಳೆಗೆ ನೆಲಮಹಡಿಯಲ್ಲಿ ಪತ್ರಗಳನ್ನು ಪರಿಶೀಲಿಸುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆ, ಅಲ್ಲಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲತಃ ಕುಂದಾಪುರ ತಾಲೂಕಿನ ಗುಲ್ವಾಡಿಯವರಾದ ಅವರು, ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. 1983ರಲ್ಲಿ ತರಂಗ ವಾರಪತ್ರಿಕೆ ಸಂಪದಕಾರಿಗ ಸುಮಾರು 18 ವರ್ಷಗಳ ಕಾಲ ದುಡಿದಿದ್ದರು. ಅವರ ಸಂಪಾದಕೀಯ ಬರಹ ಅಂತರಂಗ-ಬಹಿರಂಗ ಅಪಾರ ಜನಮನ್ನಣೆ ಗಳಿಸಿತ್ತು. ಮುಂಬೈನಲ್ಲಿ ಪತ್ರಿಕೋದ್ಯಮ ಹಾಗೂ ಜಾಹೀರಾತು ಕ್ಷೇತ್ರದಲ್ಲಿ ಫ್ರಿಲ್ಯಾನ್ಸರ್ ಆಗಿ ದುಡಿದಿದ್ದರು. ಆ ಸಮಯದಲ್ಲಿ ಅವರು ಪ್ರಜಾವಾಣಿ ಮತ್ತು ಸುಧಾ ವಾರಪತ್ರಿಕೆಗಳಿಗೆ ಅರೆಕಾಲಿಕ ವರದಿಗಾರರಾಗಿಯೂ ಸೇವೆ ಸಲ್ಲಿಸಿದ್ದರು.

ತರಂಗ ವಾರಪತ್ರಿಕೆಯಿಂದ ಹೊರಬಂದ ಅವರು ವಿಜಯ್ ಸಂಕೇಶ್ವರ್ ಅವರ 'ನೂತನ'ದ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಗುಲ್ವಾಡಿ ಅವರು ಮೊದಲ ಮೊಗ್ಗು ಎಂಬ ಕಥಾ ಸಂಕಲವನ್ನೂ ಹೊರತಂದಿದ್ದರು.

ಅಲ್ಲದೇ ಅಂತರಂಗ-ಬಹಿರಂಗ ಅಂಕಣ ಬರಹಗಳ ಕೃತಿಗೆ 1993ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1990ರಲ್ಲಿ ರಾಜ್ಯೋತ್ಸವ, ವಿಶ್ವೇಶ್ವರಯ್ಯ, ವೀರ ಸಾವರ್ಕರ್, ಭಾರ್ಗವ,ಕೊಂಕಣಿ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳಿಗೆ ಭಾಜನರಾಗಿದ್ದರು.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...