ಬೆಂಗಳೂರು: ಡಿಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸುಮ್ಮನಿದ್ದ ಬಿಜೆಪಿ ನಾಯಕರು ಇದೀಗ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸರ್ಕಾರದಲ್ಲಿರುವವರೆಲ್ಲರೂ ಭ್ರಷ್ಟರೇ.ಡಿಕೆ ಶಿವಕುಮಾರ್ ಮನೆಯಲ್ಲಿ 300 ಕೋಟಿ ರೂ. ಪತ್ತೆಯಾಗಿದೆ ಎಂದು ವರದಿಯಾಗಿದೆ. ಒಂದು ವೇಳೆ ಐಟಿ ಇಲಾಖೆ ರಾಜ್ಯ ಸರ್ಕಾರದ ಅಧೀನದಲ್ಲಿದ್ದಿದ್ದರೆ,