ಶಾಶ್ವತ ನೀರಾವರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್`ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮಧ್ಯೆ, ಟೌನ್ ಹಾಲ್ ಬಳಿ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಹಲವರು ಪ್ರತಿಭಟನೆ ಸಾಥ್ ನೀಡಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ರೈತರು