ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ ನೆರವೇರಿಸಿ ಮಾತನಾಡಿದ ಅವರು ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು