ಬೆಂಗಳೂರು : ಆರ್ಯ ವೈಶ್ಯ ನಿಗಮ ಮಂಡಳಿ ಮತ್ತು ಬ್ರಾಹ್ಮಣ ನಿಗಮ ಮಂಡಳಿಗೆ ಈ ಬಜೆಟ್ ನಲ್ಲಿ ತಲಾ 10 ಕೋಟಿ ಅನುದಾನ ನೀಡುತ್ತೇನೆ.ಸ್ಥಗಿತಗೊಂಡಿರೋ ವಿದ್ಯಾರ್ಥಿ ವೇತನ ಬಿಡುಗಡೆಗೂ ಆದೇಶ ನೀಡುತ್ತೇನೆ ಅಂತಾ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ನ ಸದಸ್ಯರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.ಆರ್ಯ ವೈಶ್ಯ ನಿಗಮ ಮತ್ತು ಬ್ರಾಹ್ಮಣ ನಿಗಮಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ಹೆಚ್ಚು ಅನುದಾನಕ್ಕೆ ಮನವಿ ಮಾಡಿದ್ದೇವೆ. ಆದರೂ