ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಮೊದಲ ತಿಂಗಳಿನಿಂದಲೇ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ಶುಕ್ರವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಬಹಳ ಪವಿತ್ರವಾದ ದಿನ ಇವತ್ತು. ವಿಧಾನಸಭೆ ಅಧಿವೇಶನ ಕೂಡ ಮುಗಿಯುತ್ತಿದೆ.ಬಿಜೆಪಿಯ ಕೊನೆಯ ದಿನಕ್ಕೆ ಈ ದಿನ ಕೂಡ ಸಾಕ್ಷಿಯಾಗಲಿದೆ.