ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ