ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ತುರ್ತು ಆ್ಯಂಬುಲೆನ್ಸ್ ಸೇವೆ 2006-07ರಲ್ಲಿ ಪ್ರಾರಂಭ ಮಾಡಲಾಗಿತ್ತು. ಆಗ ಅದರ ನಿರ್ವಹಣೆಯನ್ನು ಟೆಂಡರ್ ಮೂಲಕ ನೀಡಲಾಗ್ತಿರಲಿಲ್ಲ. ನಂತರ ಟೆಂಡರ್ನಲ್ಲಿ ನಿರ್ವಹಣೆ ಆರಂಭಿಸಲಾಗಿದ್ದು, ಸತ್ಯಂ ಅನ್ನುವ ಸಂಸ್ಥೆಗೆ ನಿರ್ವಹಣೆ ಜಬಾಬ್ದಾರಿ ನೀಡಲಾಗಿತ್ತು. ಆಗ ಯಾವುದೇ ಸಮಸ್ಯೆ ಇರಲಿಲ್ಲ. ನಂತರ J.V.K ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿದೆ. ಇದೀಗ