ತುಮಕೂರು : ಇಂದು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ 116 ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಸಿದ್ದಲಿಂಗ ಸ್ವಾಮೀಜಿಯವರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಮಂತ್ರಘೋಷಗಳಿಂದ ಪೂಜೆ ನಡೆಯಿತು. ಗದ್ದುಗೆಗೆ ಫಲ-ಪುಷ್ಪಗಳಿಂದ ಅಲಂಕಾರ ಮಾಡಲಾಯಿತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿಯಾದರು. ಜಯಂತಿ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. ಬೆಳಗ್ಗೆ 11