ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1217 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,49,445ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 37,318ಕ್ಕೆ ತಲುಪಿದೆ. ಕಳೆದ ಒಂದು ದಿನದಲ್ಲಿ 1198 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,93,715ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 18368ಕ್ಎಕ