ನಗರದ ಟೌನ್ ಹಾಲ್ ನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಜನರ ಆಶಯ ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ, ಪ್ರಜಾಪ್ರಭುತ್ವವು ಜನರಿಂದ ಮತ್ತು ಜನರಿಗಾಗಿ ನಡೆಸುವ ಸರ್ಕಾರವಾಗಿದೆ. ಹಾಗಾಗಿ, ಮತದಾನ ನಮ್ಮ ಹಕ್ಕು ಮಾತ್ರವಲ್ಲ ನಮ್ಮ ಕರ್ತವ್ಯವೂ ಆಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಚುನಾವಣೆಗಳಲ್ಲಿ ಮತದಾನ ಗಣರಾಜ್ಯಕ್ಕೆ ಯಜ್ಞವಿದ್ದಂತೆ. ಒಂದು ವೋಟು