ಹೈದರಾಬಾದ್ನ ಸಿಕಂದರಾಬಾದ್ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಮಹಿಳೆ ಸಹಿತ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದ್ದು, ಹೊಗೆಯಿಂದ ಉಸಿರುಗಟ್ಟಿ ಸಾವಿಗೀಡಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. 12 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಈ ಪೈಕಿ 6 ಮಂದಿ ಸಾವಿಗೀಡಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು