ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ನಿಂದ ಗೋರಖಪುರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ನಿನ್ನೆ ರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆ ರಸ್ತೆಯಲ್ಲಿ ಹೋಗುತ್ತಿದ್ದ ಕೆಲವು ಪ್ರಯಾಣಿಕರು