ಉಡುಪಿ : ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಮಣಿಪಾಲದಲ್ಲಿ ಒಂದೇ ವಾರದಲ್ಲಿ 18 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.ಅದರಲ್ಲೂ ನಿನ್ನೆ (ಡಿಸೆಂಬರ್ 25) ಶನಿವಾರ 14 ಜನರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲೇ ಅಧಿಕ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಣಿಪಾಲದ 09 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳೆಲ್ಲ ಹೊರ ರಾಜ್ಯದವರು. ಪಾಸಿಟಿವ್ ಬಂದ 14 ಮಂದಿಯ ವರದಿಯನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ.