ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1432 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಅಸುನೀಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಿಸಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 318 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.