ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಏಪ್ರಿಲ್ 14ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಏಪ್ರಿಲ್ 14ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ