ಪ್ರಧಾನ ಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆಯಡಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಬಳ್ಳಾರಿಯಲ್ಲಿ ನಿರ್ಮಿಸಿರುವ 210 ಹಾಸಿಗೆಗಳ ಆಸ್ಪತ್ರೆಗೆ ಚಾಲನೆ ನೀಡಲಾಗುತ್ತಿದೆ. ಸೂಪರ್ ಸ್ಪೆಷಾಲಿಟಿ ಟ್ರಾಮಾ ಕೇರ್ ಸೆಂಟರ್ (ತುರ್ತು ಚಿಕಿತ್ಸಾ ಘಟಕ)ನ್ನು ಆಗಸ್ಟ್ 31 ರಂದು ಬೆಳಗ್ಗೆ 11.30 ಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಸಚಿವ ಡಾ.ಹರ್ಷವರ್ಧನ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲೆಕ್ಟ್ರಾನಿಕ್ ಉದ್ಘಾಟನೆ (ಇ-ಉದ್ಘಾಟನೆ) ಮಾಡಲಿದ್ದಾರೆ.ಕೇಂದ್ರ ಆರೋಗ್ಯ ಖಾತೆಯ ಕೇಂದ್ರ