ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಗುಜರಾತ್ಗೆ ಭೇಟಿ ನೀಡಿದ ಬೆನ್ನಲ್ಲೇ ಆಪ್ನ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಕಾಂಗ್ರೆಸ್ ಕೂಡ ಹಿನ್ನೆಡೆ ಅನುಭವಿಸಿದ್ದು, ಹಲವು ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಗುಜರಾತ್ಗೆ ಎರಡು ದಿನ ಭೇಟಿ ನೀಡಿದ್ದರು. ಅಲ್ಲಿ ಅವರು ರೋಡ್ ಶೋ ನಡೆಸಿದ್ದರು.