ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದಕ್ಕೆ ರೈತರ ವಿರೋಧದ ನಡುವೆಯೂ ಸುಪ್ರೀಂಕೋರ್ಟ್ ಆದೇಶ ಪಾಲನೆಗಾಗಿ ಕರ್ನಾಟಕ ಸರ್ಕಾರ ಕೆಆರ್ಎಸ್ನಿಂದ 11 ಸಾವಿರ ಕ್ಯೂಸೆಕ್ ನೀರು ಮತ್ತು ಕಬಿನಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ಸೇರಿ ಒಟ್ಟು 16 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದೆ. ಹಾರಂಗಿ ಜಲಾಶಯಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಅದು ಕೆಆರ್ಎಸ್ಗೆ ಸೇರುತ್ತದೆ. ಇದರಿಂದಾಗಿ ರೈತರ ಪ್ರತಿಭಟನೆಯ ಕಾವು ಮತ್ತಷ್ಟು ತೀವ್ರಗೊಂಡಿದ್ದು