ಬೆಂಗಳೂರು(ಆ.10): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಮುಗಿಯುತು ಎನ್ನುವಷ್ಟರಲ್ಲಿ ಈಗ ಮೂರನೇ ಅಲೆ ಶುರುವಾಗಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ತನ್ನ ಆರ್ಭಟ ತೋರಲು ಶುರು ಮಾಡಿದೆ. ಕೇಸ್ಗಳು ಹೆಚ್ಚುತ್ತಿರುವ ಹಿನ್ನೆಲೆ, ನಗರದಲ್ಲಿ ಮೈಕ್ರೋ ಕಂಟೈನ್ಮೆಂಟ್ ಪ್ರದೇಶಗಳು ಹೆಚ್ಚಾಗುತ್ತಿವೆ. ಸೋಂಕು ತ್ವರಿತ ಗತಿಯಲ್ಲಿ ಹರಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಸರ್ಕಾರ ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ರಾಜ್ಯದಲ್ಲಿ