ರಾಜ್ಯದಲ್ಲಿ 1632 ಕೊರೊನಾ ಪಾಸಿಟಿವ್: 25 ಮಂದಿ ಬಲಿ

bengaluru| Geetha| Last Updated: ಶನಿವಾರ, 14 ಆಗಸ್ಟ್ 2021 (21:55 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,28,033ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 36,958ಕ್ಕೆ ಇಳಿಕೆಯಾಗಿದೆ.

ಒಂದು ದಿನದಲ್ಲಿ 1612 ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,68,351ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 22,698ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 377ಕ್ಕೆ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ 411 ಪ್ರಕರಣಗಳು ದೃಢಪಟ್ಟಿದ್ದು, ಇದೇ ಮೊದಲ ಬಾರಿ ಬೆಂಗಳೂರನ್ನು ಹಿಂದಿಕ್ಕಿದೆ. ದಕ್ಷಿಣ ಕನ್ನಡದಲ್ಲಿ 7 ಮಂದಿ ಒಂದೇ ದಿನ ಸೋಂಕಿಗೆ ಬಲಿಯಾದರೆ, ಬೆಂಗಳೂರಿನಲ್ಲಿ ಕೇವಲ ಒಂದು ಸಾವು ಸಂಭವಿಸಿದೆ.ಇದರಲ್ಲಿ ಇನ್ನಷ್ಟು ಓದಿ :