ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1653 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 31 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 418 ಸೋಂಕಿಗೆ ಗುರಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,89,994ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,293ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಒಂದು ದಿನದಲ್ಲಿ 2572 ಮಂದಿ ಸೋಂಕಿನಿಂದ ಗುಣಮುಕಿತರಾಗಿದ್ದು, ಒಟ್ಟಾರೆ