ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ಮಧ್ಯಂತರ ಪರಿಹಾರ ಕೊಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ. ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು