ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು, ಏಳು ವರ್ಷದ ಬಾಲಕಿ ಸೇರಿ ಗ್ರಾಮದ 17 ಜನರಿಗೆ ಕಚ್ಚಿ ಗಾಯಗೊಳಿಸಿದೆ. ಇನ್ನು ಬಾಲಕಿಗೆ ತೀವ್ರ ಗಾಯಗಳಾದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿ ಜೋರಾಗಿದ್ದು, ನಾರಾಯಣಪುರ ಗ್ರಾಮದ ಜನರು ಮನೆಯಿಂದ ಹೊರಬರಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ. ಮನುಷ್ಯರಿಗೆ ಅಷ್ಟೇ ಅಲ್ಲದೇ ಹಸು ಎಮ್ಮೆಗಳಿಗೂ